Site icon ಉಡುಪಿ ನ್ಯೂಸ್ ಪ್ಲಸ್

ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಕಾಂಚನ್ ವಿರುದ್ದ ಸುಳ್ಳು ಸುದ್ದಿ – ಪ್ರಕರಣ ದಾಖಲು

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಕಾಂಚನ್ ವಿರುದ್ದ ಸುಳ್ಳು ಸುದ್ದಿ ಹರಡಿದ ಆರೋಪದಡಿಯಲ್ಲಿ ಇಂದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌‌. ದೂರಿನಲ್ಲಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ನಾನು ಯಾವುದೇ ಧರ್ಮಕ್ಕೆ ಅಥವಾ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿರುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿಕೆ ನೀಡಿದ್ದೇನೆ. ಅದರೆ ಒಬ್ಬ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ” ಎಂದು ಉಲ್ಲೇಖಿಸಲಾಗಿದೆ. “ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ.ಅದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಗೆ ಎಚ್ಚರಿಕೆ ನೀಡಿ ಸರಿಯಾದ ಕಾನೂನು ಕ್ರಮ ಕೈಗೊಳ್ಳ ಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

Exit mobile version