Site icon ಉಡುಪಿ ನ್ಯೂಸ್ ಪ್ಲಸ್

ಎರ್ಮಾಳು : ಸರಣಿ ಅಪಘಾತ ಶಾಲಾ ವಾಹನ ಪಲ್ಟಿ ಕಾರು ಜಾಖಂ ಆತಂಕಗೊಂಡ ಸಾರ್ವಜನಿಕರು ಸಾಮೂಹಿಕ ಪ್ರಾರ್ಥನೆಗೆ ಮೊರೆ

ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66 ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಾದೇವಿ ಎಂಬ ಮಹಿಳೆಗೆ ಡಿಕ್ಕಿಯಾಗಿದ್ದು ಬಳಿಕ ಉಡುಪಿ ಕಡೆ ಸಾಗುವ ಹೆದ್ದಾರಿ ಮಧ್ಯೆ ಪಲ್ಟಿಯಾಗಿದೆ. ಇದೇ ಸಂದರ್ಭಮಂಗಳೂರು ನಿಂದ ಉಡುಪಿ ಕಡೆ ಸಾಗುತಿದ್ದ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡ‌ರ್ ದಾಟಿ ಮಂಗಳೂರು ಕಡೆ ಸಾಗುವ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ. ಇದೇ ಸಂದರ್ಭ ಉಡುಪಿ ಕಡೆ ಸಾಗುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ. ಅಪಘಾತದಲ್ಲಿ 3 ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುವ ಸಮಯ ಶಾಲಾ ಬಸ್ ನಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ಟೋಲ್ ಸಿಬ್ಬಂದಿ ಕ್ರೇನ್ ಮೂಲಕ ಬಸ್ಸನ್ನು ಮೇಲೆತ್ತುವಲ್ಲಿ ಸಹಕರಿಸಿದರು. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಉಚ್ಚಿಲ ಮುಳೂರ್ ಏರ್ಮಾಲ್ ಇಲ್ಲಿ ಸರಣಿ ಅಪಘಾತವಾಗುತಿದ್ದು ಸಾರ್ವಜನಿಕರು ಆತಂಕಗೊಂಡಿದ್ದು ಸಾಮೂಹಿಕ ಪ್ರಾರ್ಥನೆಗೆ ಮೊರೆ ಹೋಗಿದ್ದಾರೆ

Exit mobile version