ಉಡುಪಿ ನ್ಯೂಸ್ ಪ್ಲಸ್

ಎಸ್‌ಡಿಎಂ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿದ ಮಂತ್ರಾಲಯ ಶ್ರೀ

ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಕ್ಯಾಂಪಸ್‌ನಲ್ಲಿ ಶುಕ್ರವಾರ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು ಆಯುರ್ವೇದ ಶಾಸ್ತ್ರದಲ್ಲಿ ಮಾಯವಾಗದ ರೋಗವೂ ಇಲ್ಲ ಮತ್ತು ಔಷಧವೂ ಇಲ್ಲ. ಇದನ್ನು ಸಮಾಜ ಅರಿಯದಿರುವುದು ನಮ್ಮ ದೌರ್ಭಾಗ್ಯ. ಮತ್ತೊಮ್ಮೆ ನಮ್ಮ ಪ್ರಾಚೀನತೆಯನ್ನು ನೆನಪಿಸಿಕೊ ಡುತ್ತ ಮಾಜವನ್ನು ಗುಣಮುಕ್ತವಾಗಿಸುವುದರಲ್ಲಿ ತೊಡಗಿರುವ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಗೆ ಧನ್ಯವಾದಗಳು ಎಂದರು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿ .

ಕೊರೋನಾದ ಸಂದರ್ಭದಲ್ಲಿ ಆಯುರ್ವೇದ ಮಹತ್ತರ ಪಾತ್ರ ಹೊಂದಿತ್ತು ಮತ್ತು ಇಂದು ಜನರಿಗೆ ಕುರಿತು ಅರಿವು ಮೂಡಿಹೇ ಹೇಳಿದರು ಉಡುಪಿಯ ಶ್ರೀಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದಂಗಳು ಆಶೀರ್ವಚನ ನೀಡಿ ದೇಶದಲ್ಲಿ ಎಸ್‌ಡಿಎಂ ಎನ್ನುವ ಮೂರಕ್ಷರದ ಹೆಸರು ಎಲ್ಲೆಡೆ ಪಸರಿಸಿದೆ. ಯೋಗ, ಶಿಕ್ಷಣ, ನ್ಯಾಚುರೋಪತಿ, ಆಯುರ್ವೇದ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರವೇಶಿಸಿ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಡಿ ವೀರೇಂದ್ರ ಹೆಗ್ಗಡೆಯವರು ಹಲವು ವರ್ಷಗಳಿಂದ ಸಮಾಜ ಕಟ್ಟುವ ಕಾರ್ಯವನ್ನು ಮಾಡುತ್ತಿದ್ದಾರೆ. ತಮ್ಮ ಇಡೀ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟವರನ್ನು ನೋಡಿದರೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದರುಕಾನು ವಿಧಾಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಎಸ್‌ಡಿಎಂ ಉಡುಪಿಯ ಅಮೂಲ್ಯ. 250 ಪುಷ್ಪ ಔಷಧಿ ಸಸ್ಯಗಳ ಪುಸ್ತಕ ಬಿಡುಗಡೆಗೊಳಿಸಿದರು,. ಕಾರ್ಯಕ್ರಮದಲ್ಲಿ ಎನ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷಡಿ ಸುರೇಂದ್ರ ಸುಮಾರ್, ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಸೇರಿದಂತೆ ಗಣ್ಯರು ಹಾಜರಿದ್ದರು.

Exit mobile version