Site icon ಉಡುಪಿ ನ್ಯೂಸ್ ಪ್ಲಸ್

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಇಂದು ದಿನಾಂಕ 08-02-2025 ರಂದು ಕಾಪು ಮಂಡಲ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ, ಕಾರ್ಯದರ್ಶಿಗಳಾದ ಎಂ.ಜಿ ನಾಗೇಂದ್ರ, ವಕ್ತಾರರಾದ ನವೀನ್ ಎಸ್.ಕೆ, ಕಾಪು ಪುರಸಭೆಯ ಸದಸ್ಯರಾದ ನಿತಿನ್ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version