Site icon ಉಡುಪಿ ನ್ಯೂಸ್ ಪ್ಲಸ್

ಕಾರ್ಕಳ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಬೇಟಿ

ಕಾರ್ಕಳ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಬೇಟಿ‌ ನೀಡಿ ಮನವಿಯನ್ನು ಸ್ವೀಕರಿಸಿದರು.‌ ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್ ಅವರ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಮತ್ತು ಕಾಂಗ್ರೆಸ್ ನಾಯಕರ ಗಮನಕ್ಕೆ ತಂದು ಈಡೇರಿಸುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಭೂ ನ್ಯಾಯ‌ ಮಂಡಳಿಯ ಸದಸ್ಯ ಸುನೀಲ್ ಭಂಡಾರಿ, ಕಾನೂನು ಘಟಕದ ಅದ್ಯಕ್ಷ ರೆಹಮತ್ತುಲ್ಲಾ, ದೀಪಕ್ ಶೆಟ್ಟಿ, ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.

Exit mobile version