Site icon ಉಡುಪಿ ನ್ಯೂಸ್ ಪ್ಲಸ್

6 ಕೋಟಿ CRIF ಅನುದಾನದಲ್ಲಿ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿ – ಶಾಸಕರು ಸಂಸದರಿಂದ ಗುದ್ದಲಿ ಪೂಜೆ

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ (CRIF) ನಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 13-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾದ ಸುಗುಣಾ ಪೂಜಾರ್ತಿ, ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ ಕಟಪಾಡಿ, ಕೋಟೆ, ಕುರ್ಕಾಲು, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಜಿಲ್ಲಾ, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version