ಉಡುಪಿ ನ್ಯೂಸ್ ಪ್ಲಸ್

ರಾಜ್ಯಾದ್ಯಂತ ‘ಚಡಿ ಸುಡುವ ಅಭಿಯಾನ’ ಆರಂಭಿಸುತ್ತೇವೆ ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್ ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ.ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ.

Exit mobile version