Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ಮಾ.1ರಂದು ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನೆ ಲೋಗೊ ಅನಾವರಣ ಕಾರ್ಯಕ್ರಮ

ಉಡುಪಿ: ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನಾ ಸಮಾರಂಭ ಮತ್ತು ಲೋಗೊ ಅನಾವರಣ ಕಾರ್ಯಕ್ರಮ ಮಾ.1 ರಂದು ಸಂಜೆ 6.30 ಕ್ಕೆ ಕಿದಿಯೂರು ಹೊಟೇಲಿನ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ರಂಜನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಲೋಗೊ ಅನಾವರಣಗೊಳಿಸುವರು ಎಂದು ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕಾಂಗ್ರೆಸ್ ಮುಖಂಡ ಪ್ರಸಾದ್‌ ರಾಜ್ ಕಾಂಚನ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಕೆ.ಹರೀಶ್ ಕುಮಾರ್, ಪಿ.ಲಕ್ಷ್ಮೀನಾರಾಯಣ ಉಪಾಧ್ಯ, ಗಣೇಶ್ ಬೈಲೂರು, ಮಹಾಬಲೇಶ್ವರ್ ಭಟ್ ಹಾಗು ಸಂಘದ ನಿರ್ದೇಶಕರುಗಳು ಉಪಸ್ಥಿತ ರಿದ್ದರು.

Exit mobile version