Site icon ಉಡುಪಿ ನ್ಯೂಸ್ ಪ್ಲಸ್

ಕಾಪು : ಹೊಸಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವ ಮಾರಿಯಮ್ಮ, ಉಚ್ಛಂಗಿ ದೇವಿಯ ಪ್ರತಿಷ್ಠೆ

ಕಾಪು: ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆ ನೆರವೇರಿತು.  ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ರವಿವಾರದ ಧಾರ್ಮಿಕ ವಿಧಿಗಳು ನಡೆದವು. ಈ ಸಂದರ್ಭ ಕಾಪು ಹೊಸಮಾರಿಗುಡಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ  ಸಮಿತಿ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಪ್ರಕಾಶ್ ಹೆಗ್ಡೆ, ಮಾಧವ ಪಾಲನ್, ಡಾ. ಸುನೀತಾ ಶೆಟ್ಟಿ, ಮಿಥುನ್ ರೈ,ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್, ಕಾಪು ತಹಶಿಲ್ದಾರ್ ಡಾ.ಪ್ರತಿಭ ಆರ್., ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.

Exit mobile version