Site icon ಉಡುಪಿ ನ್ಯೂಸ್ ಪ್ಲಸ್

50 ಲಕ್ಷ ರೂಪಾಯಿ ಅನುದಾನದಲ್ಲಿ ಬೆಳಪು ಪಣಿಯೂರು ಮುಖ್ಯ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಪು – ಪಣಿಯೂರು ಮುಖ್ಯ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಶೋಭಾ ಭಟ್, ಉಚ್ಚಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಶೇಖರ್, ಬೆಳಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರವೀಣ್ ಡಿಸೋಜಾ, ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಗುತ್ತಿಗೆದಾರು, ಸ್ಥಳೀಯರು ಉಪಸ್ಥಿತರಿದ್ದರು.

Exit mobile version