Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ಇಂದ್ರಾಳಿಯಲ್ಲಿ “ಎಪ್ರಿಲ್ ಫೂಲ್” | ಪ್ರಧಾನಿ ನರೇಂದ್ರ ಮೋದಿ, ಶೋಭಾ ಕರಂದ್ಲಾಜೆ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮುಖವಾಡ ಧರಿಸಿ ಅಣಕ ಪ್ರದರ್ಶಿಸಿ ಆಕ್ರೋಶ

ಉಡುಪಿ: ಇಂದ್ರಾಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು “ಎಪ್ರಿಲ್ ಫೂಲ್” ಆಚರಿಸಿ ಪ್ರಧಾನಿ ನರೇಂದ್ರ ಮೋದಿ, ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮುಖವಾಡ ಧರಿಸಿ ಸೇತುವೆ ಉದ್ಘಾಟಿಸುವ ಅಣಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕೆಲವು ನಿಮಿಷಗಳ ಕಾಲ ಸಾಂಕೇತಿಕವಾಗಿ ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ರಮೇಶ್ ಕಾಂಚನ್, ಅಝೀಜ್ ಉದ್ಯಾವರ, ಕಿಶನ್ ಹೆಗ್ಡೆ, ಜ್ಯೋತಿ ಹೆಬ್ಬಾರ್, ದಿನೇಶ್ ಶೆಟ್ಟಿ ಮೊಗೆಹಳ್ಳಿ, ಪ್ರಸಾದ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಸುರೇಶ್ ಕಲ್ಲಾಗರ, ಮಂಜುಳಾ ನಾಯಕ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Exit mobile version