ಉಡುಪಿ ನ್ಯೂಸ್ ಪ್ಲಸ್

ಸುರತ್ಕಲ್ ಫಾಝಿಲ್ ಪ್ರವೀಣ್ ನೆಟ್ಟಾರು ಹಾಗೂ ಮಸೂದ್, ಹತ್ಯೆ ಪುಕರಣಗಳನ ಸರಕಾರ ಗಂಭೀರವಾಗಿ ಪರಿಗಣಿಸಬೇಕು:ಯು. ಟಿ.ಖಾದರ್

ಮಸೂದ್, ಪುವೀಣ್ ನೆಟ್ಟಾರು ಹಾಗೂ ಸುರತ್ಕಲ್ ಫಾಝಿಲ್ ಹತ್ಯೆ ಪುಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಹಾಗೂ ಈ ಹತ್ಯೆಗಳಿಗೆ ಯಾವ ಸಂಘಟನೆಗಳು ಕುಮ್ಮಕ್ಕು ನೀಡಿದೆಯೋ ಅವುಗಳನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಹಾಗೂ ಸರಕಾರ ಮಾಡಬೇಕು ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ. ಮಂಗಳೂರು ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಿನ್ನೆ ಬೆಳ್ಳಾರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಕುಟುಂಬನ್ನೂ ಭೇಟಿಯಾಗಬೇಕಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಈ ನಡುವೆ ಅವರು ಇಲ್ಲಿಂದ ವಿಮಾನ ಏರುವ ವೇಳೆಗೆ ಇಲ್ಲಿ ಮತ್ತೊಂದು ಕೊಲೆಯಾಗಿದೆ ಎಂದು ಹೇಳಿದರು.

Exit mobile version