ಉಡುಪಿ ನ್ಯೂಸ್ ಪ್ಲಸ್

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರ ಸಪ್ತ ವನಮಹೋತ್ಸವ ಕಾರ್ಯಕ್ರಮ

 ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ ಜರಗಿದ ವನಮಹೋತ್ಸವ ಕಾರ್ಯಕ್ರಮವನ್ನು ಕಣ್ಣಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷ  ಶೀನ ಪೂಜಾರಿಯವರು ಸಸಿ ನೆಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.ಪಡುಬಿದ್ರಿ ಸಹಕಾರಿ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಉದ್ದೇಶಿಸಿ ಮಾತನಾಡಿ, ಸ‌ಹಕಾರ ಸಂಸ್ಥೆಗಳ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಲು ಸಾಧ್ಯ ಎಂಬ ಧ್ಯೇಯದೊಂದಿಗೆ ಕೇಂದ್ರ ಸರಕಾರದ ಯೋಜನೆಯಾದ “ತಾಯಿಯ ನೆನಪಿನಲ್ಲಿ ಒಂದು ಗಿಡ” ಎಂಬ ಅಭಿಯಾನದಡಿ ಗಿಡ ನೆಟ್ಟು ಅದನ್ನು ಪೋಷಿಸಿ ಬೆಳೆಸಿ ಉತ್ತಮ ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಮಹತ್ತರ ಯೋಜನೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಕೈಗೊಂಡಿದೆ. ತರಂಗಿಣಿ ಮಿತ್ರ ಮಂಡಳಿಯವರು 1300  ಗಿಡಗಳನ್ನು ಕೊಟ್ಟು ಸಹಕಾರ ನೀಡಿದ್ದಾರೆ ಎಂದರು.  ಈ ಸಂದರ್ಭ ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು. ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.

Exit mobile version