ಉಡುಪಿ ನ್ಯೂಸ್ ಪ್ಲಸ್

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ

ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ. ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ ಸೊಸೈಟಿಯ ಕಾರ್ಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ ಗುರುವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಛೇರಿ, ಸಹಕಾರ ಸಂಗಮದಲ್ಲಿ ನೆರವೇರಿತು ನಿವೃತ್ತ ಮುಖ್ಯ ಶಿಕ್ಷಕ ಜಿನ್‌ರಾಜ್ ಸಿ. ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ ಮಾಲಿನ್ಯ ಮುಕ್ತ ಪರಿಸರ ನಮ್ಮೆಲ್ಲರ ಹಕ್ಕು ಎಂಬುದನ್ನು ನಾವು ಮರೆಯಬಾರದು. ಸಂಸ್ಥೆಯನ್ನು ಬೆಳೆಸಿದ ವೈ ಸುಧೀರ್ ಕುಮಾರ್ ಅವರ ಕಾರ್ಯ ವೈಖರ್ಯ  ಶ್ಲಾಘನೀಯ ಮತ್ತು ಶಿಸ್ತು ಬದ್ಧವಾದ ಸೊಸೈಟಿ ಎಂದರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ಪ್ರಾಸ್ತಾವಿಕವಾಗಿ ಮಾತನಾಡಿ, ಅಂತಾರಾಷ್ಟ್ರೀಯ ಸಹಕಾರ ವರ್ಷ ಇಡೀ ಜಗತ್ತಿನಾದ್ಯಂತ ನಡೆಯುತ್ತಿದೆ. ಇದನ್ನು ವಿಶ್ವ ಸಂಸ್ಥೆಯು ಸಹಕಾರ ವರ್ಷ ಎಂದು ಘೋಷಣೆ ಮಾಡಿದೆ. ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಲು ಸಾಧ್ಯ ಎಂಬ ಧ್ಯೇಯದೊಂದಿಗೆ “ಪರಿಸರ ಮಾಲಿನ್ಯ ತಡೆಯಿರಿ ಆರೋಗ್ಯಕರ ಸಮಾಜವನ್ನು ನಿರ್ಮಿಸಿ” ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು. ಈ ಸಂದರ್ಭ ಪಡುಬಿದ್ರಿ ಸಿ.ಎ.‌ ಸೊಸೈಟಿ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ,ಹಾಸನ್ ಬಾವಾ ವಾಸು ದೇವಾಡಿಗ, ಕಾಂಚನಾ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಮತ್ತು ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.  ಸೊಸೈಟಿ ಕಾರ್ಯವ್ಯಾಪ್ತಿಯಲ್ಲಿರುವ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿದರು. ಸಹಕಾರಿ ಯೂನಿಯನ್ ಸಿಇಓ ಅನುಸೂಯ ವಂದಿಸಿದರು.

Exit mobile version