Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ:15 ಲಕ್ಷ ರೂ.ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಕಾರ್ಯಕ್ರಮ

ಉಡುಪಿ: ಸಾಮಾಜಿಕ ಕಳಕಳಿಯ ಧೈಯದಡಿ ಉಡುಪಿ ಜಿಲ್ಲೆಯ ಸುಮಾರು 35 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಜುಲೈ 05, ಶನಿವಾರ ಬೆಳಿಗ್ಗೆ 10.00 ಗಂಟೆಗೆ ಉಡುಪಿ ಟೌನ್‌ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖಾ ಉಪನಿರ್ದೇಶಕರಾದ ಲೋಕೇಶ್ ಸಿ, ಉಡುಪಿಯ ತಹಶೀಲ್ದಾರರಾದ ಪಿ.ಆರ್ ಗುರುರಾಜ್, ಉಡುಪಿ ನಗರಸಭೆಯ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಉಪಸ್ಥಿತರಿರುವರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜೆ.ಸಿ.ಐ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ ಇವರಿಂದ ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಇರಲಿದೆ. ಅಂತಾರಾಷ್ಟ್ರೀÂಯ ಸಹಕಾರ ವರ್ಷ 2025 – ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತವೆ ಎನ್ನುವ ಧೈಯದೊಂದಿಗೆ “ಏಕ್ ಪೇಡ್ ಮಾ ಕೆ ನಾಮ್” ಗಿಡನೆಡುವ ಸಂಕಲ್ಪ, ಹಸಿರು ಪರಿಸರ ನಿರ್ಮಿಸುವ ಕಾರ್ಯಕಲ್ಪದಂತೆ ಶಾಲಾ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಕಾರ್ಯಕ್ರಮವು ಇರುವುದೆಂದು ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು

Exit mobile version