Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ “ ಮತ ಕಳ್ಳತನದ ವಿರುದ್ಧ ಕ್ಯಾಂಡಲ್ ಲೈಟ್ ಮಾರ್ಚ್ ಪ್ರತಿಭಟನೆ

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ “ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ ” ಕ್ಯಾಂಡಲ್ ಲೈಟ್ ಮಾರ್ಚ್ ಪ್ರತಿಭಟನೆಯನ್ನು ಇಂದು ಸಂಜೆ 06.00ಗಂಟೆಗೆ ಕ್ಲಾಕ್ ಟವರ್ ನ ಗಾಂಧಿ ಪ್ರತಿಮೆ ಬಳಿ ಆಯೋಜಿಸಲಾಗಿತ್ತು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮತ ಕಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷ ಸಮರವನ್ನು ಸಾರಿದೆ ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟು ವಂತಹ ಕೆಲಸ ಮಾಡಿದೆ ಚುನಾವಣೆಯನ್ನು ನಿಷ್ಪಕ್ಷಪಾತ, ನಿರ್ಭಿತಿಯಿಂದ ನಡೆಸಬೇಕು. ಆದರೆ, ಚುನಾವಣಾ ಆಯೋಗದ ಧೋರಣೆಯನ್ನು ನೋಡಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಚುನಾವಣಾ ಆಯೋಗದ ಅವ್ಯವಹಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತದಾನದ ಹಕ್ಕನ್ನು ನೀಡಿದರೆ, ಇಲ್ಲಿ ಒಬ್ಬ ವ್ಯಕ್ತಿ ನಾಲ್ಕು ಬಾರಿ ಮತದಾನ ಮಾಡಿದ ಉದಾಹರಣೆಗಳಿವೆ ವಿರೋಧ ಪಕ್ಷದ ನಾಯಕರ ಮೇಲೆ ಇಡಿ, ಐಟಿ ದಾಳಿ ಮಾಡಿಸುವ ಕೇಂದ್ರದ ಬಿಜೆಪಿ ನಾಯಕರು, ಇದೀಗ ಮತಗಳ್ಳತನಕ್ಕೂ ಕೈಹಾಕಿದ್ದಾರೆ. ಚುನಾವಣೆ ಆದ ತಕ್ಷಣ ರಾಹುಲ್ ಗಾಂಧಿಯವರು ಮತದಾನ ಪಟ್ಟಿ ಕೇಳಿದರೂ ಕೊಡಲಿಲ್ಲ. ನಮ್ಮ ಹೋರಾಟದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿರುವ ಬಿಜೆಪಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಈ ವೇಳೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳಕೆಬೈಲ್,ಕಿಶೋರ್ ಕುಮಾರ್ ಗಣೇಶ್ ೆ- ಉಪಸ್ಥಿತರಿದ್ದರು.

Exit mobile version