Site icon ಉಡುಪಿ ನ್ಯೂಸ್ ಪ್ಲಸ್

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ.ಕುಟುಂಬ ಸಮೇತ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಇಂದು ದಿನಾಂಕ 29.08.2025 ರಂದು ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ದೇವಸ್ಥಾನದ ವಾಸ್ತು, ಕಲ್ಲಿನ ಕೆತ್ತನೆ, ಮರದ ಕೆತ್ತನೆ ಹಾಗೂ ದೇವಸ್ಥಾನದ ಸ್ವಚ್ಛತೆಯನ್ನು ನೋಡಿ ಮೆಚ್ಚುಗೆ ಸೂಚಿಸಿ, ದೇವಸ್ಥಾನದಲ್ಲಿ ಇದೇ ಬರುವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ದಸರಾ ಉತ್ಸವಕ್ಕೆ ಜಿಲ್ಲಾಡಳಿತ ವತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ದಿನೇಶ್ ಎರ್ಮಾಳ್, ರಾಘವೇಂದ್ರ ಉಪಾಧ್ಯಾಯ, ಬಾಲಕೃಷ್ಣ ಪೂಜಾರಿ, ಲಾಲಾಜಿ ಕುಂದರ್ ಹಾಗೂ ದೇವಸ್ಥಾನದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.

Exit mobile version