Site icon ಉಡುಪಿ ನ್ಯೂಸ್ ಪ್ಲಸ್

ಬನ್ನಂಜೆ ನಾರಾಯಣಗುರು ವೃತ್ತ ತೆರವು: ಬೆಳ್ಳೆ ಶಿವಾಜಿ ಎಸ್ ಸುವರ್ಣ ಖಂಡನೆ

ಉಡುಪಿ: ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್‌ ಆಫ್ ಬರೋಡ ನಾಮಫಲಕದ ವೃತ್ತ ರಚಿಸಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ .ಸ್ಥಳೀಯಾಡಳಿತ ತಕ್ಷಣ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಸಮಸ್ತ ಬಿಲ್ಲವ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾರ್ಯದರ್ಶಿ ರಾಷ್ಟೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಬೆಳ್ಳೆ ಶಿವಾಜಿ ಎಸ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

Exit mobile version