ಉಡುಪಿ ನ್ಯೂಸ್ ಪ್ಲಸ್

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ

ಬೆಳಗಾವಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ರಾತ್ರಿ 10ರ ಸುಮಾರಿಗೆ ಸಚಿವರಿಗೆ ಹೃದಯಾಘಾತವಾಗಿದ್ದು, ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸೇವೆ ಸಲ್ಲಿಸಿದ್ದಾರೆ.

Exit mobile version