Site icon ಉಡುಪಿ ನ್ಯೂಸ್ ಪ್ಲಸ್

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ನಲ್ಲಿ ಬಹುಮಾನ

ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ  ವಿದ್ಯಾರ್ಥಿಗಳು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ  ಪುರುಷರ ಮತ್ತು ಮಹಿಳೆಯರ  ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬಹುಮಾನ ಪಡೆದಿರುತ್ತಾರೆ.

   ಈ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗವು  ಎರಡನೇ ಸ್ಥಾನ ಪಡೆದರೆ, ಪುರುಷರ ವಿಭಾಗವು ತೃತೀಯ ಸ್ಥಾನ ಪಡೆದಿದೆ.

    ಮಹಿಳಾ ವಿಭಾಗವು ಬಿಎಮ್‌ಎಸ್ ಇಂಜಿನಿಯರಿಂಗ್ ಕಾಲೇಜು ಬೆಂಗಳೂರು ಇಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Exit mobile version