Site icon ಉಡುಪಿ ನ್ಯೂಸ್ ಪ್ಲಸ್

ಸೆ. 22 ರಿಂದ ಅ. 2 ವರೆಗೆ ಕಾಪು ಹೊಸ ಮಾರಿಗುಡಿಯಲ್ಲಿ   ಶರನ್ನವರಾತ್ರಿ ಮಹೋತ್ಸವ

ಕಾಪು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವವು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಯೋಗದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ಸೆಪ್ಟೆಂಬರ್ 22ರಂದು ಬೆಳಿಗ್ಗೆ 08:30ಕ್ಕೆ ಸರಿಯಾಗಿ ಶರನ್ನವರಾತ್ರಿ ಮಹೋತ್ಸವದ ಉದ್ಘಾಟನೆಯನ್ನು 9 ಜನ ಗಣ್ಯ ಮಹಿಳೆಯರು ಮಾಡಲಿದ್ದಾರೆ ಕಾವು ಕ್ಷೇತ್ರ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕ ಭಕ್ತರು ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎಲ್ಲೆಡೆಯೂ 9 ದೀಪಗಳನ್ನು ಬೆಳಗುವ ಮುಖೇನ ಕಾಪುವಿನ ಅಮ್ಮನ ಸಾನಿಧ್ಯ ಬೆಳಗಿದೆ. ಹಾಗಾಗಿ ಈ ಬಾರಿಯ ನವರಾತ್ರಿಯಲ್ಲಿ 9 ದೀಪಗಳನ್ನು ಬೆಳಗುವ ಮುಖೇನ ಉದ್ಘಾಟನಾ ಸಮಾರಂಭ ನಡೆಯಲಿದೆ. ಸೆಪ್ಟೆಂಬರ್ 30ರ ಮಂಗಳವಾರ ಪೂರ್ವಾಹ್ನ 11:30ಕ್ಕೆ ಚಂಡಿಕಾಯಾಗ ಪೂರ್ಣಾಹುತಿ ತದನಂತರ ಮಹಾ ಅನ್ನಸಂತರ್ಪಣೆ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾಪು ಕ್ಷೇತ್ರದ ಶಾಸಕರಾದ ಗುರ್ಮ ಸುರೇಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಲಿದೆ.   ಬೆಳಿಗ್ಗೆ 10.00 ರಿಂದ ಶ್ರೀದೇವಿಗೆ ಹರಕೆಯಾಗಿ ಬಂದಿರುವ ಸೀರೆಗಳನ್ನು ದೇವಳದ ಪ್ರಾಂಗಣದಲ್ಲಿ ಏಲಂ ಮಾಡಲಾಗುವುದು.  

   ಅದೇ ದಿನ ಸಂಜೆ 05:30 ರಿಂದ ಶ್ರೀದೇವೀ ದುರ್ಗಾ ನಮಸ್ಕಾರ ಪೂಜಾ ನಡೆಯಲಿದೆ. ಭಾಗಿಯಾಗುವ ಭಕ್ತರು  ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆಯಲ್ಲಿ ಭಾಗಿಯಾಗಬಹುದು.   ಪ್ರತಿನಿತ್ಯ ಶ್ರೀದೇವಿಗೆ ಕಟ್ಟೋಕ್ತ ಪೂಜೆ ನಡೆಯಲಿದ್ದು,  ಪೂಜಾ ಪ್ರಸಾದ ಸ್ವೀಕರಿಸಲು ಅವಕಾಶವಿದೆ.   ಶರನ್ನವರಾತ್ರಿಯ ಎಲ್ಲಾ ದಿನಗಳಲ್ಲೂ ಶ್ರೀದೇವಿಗೆ ಕಲ್ಲೋಕ್ತ ಪೂಜೆ ನಡೆಯುತ್ತದೆ ಸಂಜೆ ಗಂಟೆ 05:30 ರಿಂದ 07.00 ರವರೆಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ. ತದನಂತರ ಸಂಜೆ ಗಂಟೆ 07:00 ರಿಂದ ಸಾಂಸ್ಕೃತಿಕ ವೈಭವದ ಮೆರುಗನ್ನು ನೀಡಲು ಸಂಗೀತ, ನೃತ್ಯ, ನಾಟಕ, ಯಕ್ಷಗಾನ ಪ್ರದರ್ಶನ, ನವರಾತ್ರಿಯ ಎಲ್ಲಾ ದಿನಗಳಲ್ಲೂ ಭಕ್ತರಿಗೆ ಬೆಳಿಗ್ಗೆ ಗಂಟೆ 9:00 ರಿಂದ ಸಂಜೆ ಗಂಟೆ 06.00ರ ವರೆಗೆ ಘಂಟಾನಾದ ಸೇವೆಯನ್ನು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಪ್ರಯುಕ್ತ ಚಿಕ್ತರು ಸನ್ನಿದಾನದಲ್ಲಿ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉಚ್ಚಂಗಿ ಸಹಿತ ಕಾಪು ಶ್ರೀ ಮಾರಿಯಮ್ಮನ ಕೃಪೆಗೆ ಪಾತ್ರರಾಗಬೇಕೆಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   

,

Exit mobile version