Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ – ಉಚ್ಚಿಲ ದಸರಾ 2025 – ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ.

ಕಾಪು, ಸೆ. 21 : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025ರ ದಸರಾ ಹಬ್ಬದ ಪ್ರಮುಖ ಆಕರ್ಷಣೆ ದೀಪಾಲಂಕಾರಕ್ಕೆ ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ ಡಾ. ಜಿ. ಶಂಕರ್ ಅವರು ಉದ್ಘಾಟಿಸಿದರು. 

  ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಪಡುಬಿದ್ರಿಯಿಂದ ಕಾಪು ಜಂಕ್ಷನ್, ಕೊಪ್ಪಲಂಗಡಿಯಿಂದ ಕಾಪು ಬೀಚ್‌ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರವನ್ನು ಜೋಡಿಸಲಾಗಿದೆ.ಈ ಸೌಂದರ್ಯವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ.

 ದೀಪಾಲಂಕಾರ ಉದ್ಘಾಟನೆಯ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ,

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಸುವರ್ಣ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್‌ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ  ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್‌, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ಉಪಸ್ಥಿತರಿದ್ದರು.

Exit mobile version