Site icon ಉಡುಪಿ ನ್ಯೂಸ್ ಪ್ಲಸ್

ಬಂಟಕಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಉಡುಪಿ, ಬಂಟಕಲ್, ೧೭ ಅಕ್ಟೋಬರ್ ೨೦೨೫: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಮತ್ತು ವಿದ್ಯಾರ್ಥಿ ಸ್ವಯಂಸೇವಕ ಸಂಘದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ೧೫ ಅಕ್ಟೋಬರ್ ೨೦೨೫ರಂದು ಕಾಲೇಜಿನ ಆವರಣದಲ್ಲಿ ಜರುಗಿತು.ಕಾರ್ಯಕ್ರಮದಲ್ಲಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ಪರಿಷತ್ ಮತ್ತು ವಿದ್ಯಾರ್ಥಿ ಸ್ವಯಂಸೇವಕ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಂಸ್ಥೆಯಲ್ಲಿ ಸಿಗುವ ಅವಕಾಶಗಳನ್ನು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮತ್ತು ಸಾಂಸ್ಥಿಕ ಅಭಿವೃದ್ಧಿ ಎರಡಕ್ಕೂ ಉಪಯೋಗಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಿಗೆ ಸಂಸ್ಥೆಯ ವಿದ್ಯಾರ್ಥಿ ಚಟುವಟಿಕೆ ಕೇಂದ್ರ, ಇನ್ಕುö್ಯಬೇಷನ್ ಕೇಂದ್ರ, ಉತ್ಪನ್ನ ಅಭಿವೃದ್ಧಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದ ಪ್ರದಾನ ಮಾಡಲಾಯಿತು ಮತ್ತು ಅವರ ಬದ್ಧತೆ ಮತ್ತು ಜವಾಬ್ದಾರಿಯ ಬಗ್ಗೆ ತಿಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ದೀಪಿಕಾ ಬಿ ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿಯಾದ ಶ್ರೀಮತಿ ಅಕ್ಷತಾ ರಾವ್ ವಿದ್ಯಾರ್ಥಿ ಸ್ವಯಂಸೇವಕ ಸಂಘದ ಉದ್ದೇಶ ಮತ್ತು ಗುರಿಗಳ ಬಗ್ಗೆ ತಿಳಿಸಿ ಕೊಟ್ಟರು. ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಪ್ರಣಿತ್ ಶೆಟ್ಟಿ, ಪ್ರತಿಯೊಬ್ಬ ವಿದ್ಯಾರ್ಥಿಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳನ್ನು
ಆಯೋಜಿಸಲು ತಂಡವು ಸಹಯೋಗದೊಂದಿಗೆ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು. ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ನಾಗರಾಜ್ ಭಟ್ ಇವರು ಮಾತನಾಡಿ ನಾಯಕತ್ವ ಎಂದರೆ ಕೇವಲ ಹುದ್ದೆಯನ್ನು ಅಲಂಕರಿಸುವುದಲ್ಲ, ಬದಲಾಗಿ ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಮತ್ತು ವಿದ್ಯಾರ್ಥಿ ಸಮುದಾಯದ ಅಭಿವೃದ್ಧಿಗಾಗಿ ವಿದ್ಯಾರ್ಥಿ ಪರಿಷತ್‌ನ ಎಲ್ಲಾ ಸದಸ್ಯರು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.

Exit mobile version