Site icon ಉಡುಪಿ ನ್ಯೂಸ್ ಪ್ಲಸ್

ದಂಡತೀರ್ಥ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಅಜ್ಜರಕಾಡು ಕ್ರೀಡಾಂಗಣದಲ್ಲಿ ಇತ್ತೀಜೆಗೆ ನಡೆದ ಕಾಪು ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಲವು ಪದಕ ಗಳನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದಿರುತ್ತಾರೆ.ಹಾಗೂ ಸುಮಾರು ಎಪ್ಪತ್ತೆರಡು ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನದಲ್ಲಿ ದಂಡತೀರ್ಥ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಕೀರ್ತಿಗೆ ಭಾಜನರಾಗಿದ್ದಾರೆ.ಪ್ರತಿಭಾನ್ವಿತರನ್ನು ಸಂಚಾಲಕರಾದ ಡಾll ಕೆ.ಪ್ರಶಾಂತ್ ಶೆಟ್ಟಿ ಯವರು ಅಭಿನಂದಿಸಿರುತ್ತಾರೆ.
ಪ್ರಾಂಶುಪಾಲ ನೀಲಾನಂದ ನಾಯ್ಕ್,ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ , ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ಹಾಗೂ ವಿಧ್ಯಾರ್ಥಿಗಳನ್ನು ಚಿತ್ರದಲ್ಲಿ ಕಾಣಬಹುದು.

Exit mobile version