ಉಡುಪಿ ನ್ಯೂಸ್ ಪ್ಲಸ್

ಶಿರ್ವ ಗ್ರಾಮ ಪಂಚಾಯತ್‌’ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಆಯ್ಕೆ

ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷ ಸ್ಥಾನ ತೆರವುಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷರಾಗಿದ್ದ ಕೆ.ಆರ್ ಪಾಟ್ಕರ್ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಪಂಚಾಯತ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರು ಕಾಂಗ್ರೆಸ್ ನ 19 ಮತ ಹಾಗೂ ಬಿಜೆಪಿಯ ಓರ್ವ ಸದಸ್ಯರ ಅಡ್ಡ ಮತ ಪಡೆದು 20 ಮತಗಳನ್ನು ಪಡೆಯುವ ಮೂಲಕ  ಜಯಗಳಿಸಿದರೆ ರತನ್ ಕುಮಾರ್ ಶೆಟ್ಟಿ ಅವರು 3 ಬಾರಿ ಶಿರ್ವ ಗ್ರಾಮ ಪಂಚಾಯತ್ ನ ಸದಸ್ಯರಾಗಿದ್ದು, 2 ಬಾರಿ ಪದವು ವಾರ್ಡ್ ನ ಸದಸ್ಯರಾಗಿದ್ದರು 

Exit mobile version