Site icon ಉಡುಪಿ ನ್ಯೂಸ್ ಪ್ಲಸ್

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಉತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪಶಸ್ತಿ 

 ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿನಿಯಾದ ಅನ್ನಪೂರ್ಣ ಶೆಣೈಯವರು ಉತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೋಫೆಶನ್ಸ್, ಮಾಹೆ ಇಲ್ಲಿ ನಡೆದ ಆರೋಗ್ಯ ಮತ್ತು ತಾಂತ್ರಿಕ ಸಂಶೋಧನಾ ಸಮ್ಮೇಳನದಲ್ಲಿ ಅತ್ಯುತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪ್ರಶಸ್ತಿಯನ್ನು ಅನ್ನಪೂರ್ಣ ಶೆಣೈಯವರು ಪಡೆದಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

Exit mobile version