Site icon ಉಡುಪಿ ನ್ಯೂಸ್ ಪ್ಲಸ್

ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ 6 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಸಂತ ಮೇರಿ ಪ್ರೌಢ ಶಾಲೆ ಶಿರ್ವದಲ್ಲಿ ಇಂದು ನಡೆದ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಶಿರ್ವದ ಕಿರಿಯ, ಹಿರಿಯ ಮತ್ತು ಪ್ರೌಢ ವಿಭಾಗಗಳಲ್ಲಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಒಟ್ಟು ಪ್ರಥಮ 6, ದ್ವಿತೀಯ 5, ಹಾಗೂ ತೃತೀಯ 3 ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಆರು ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Exit mobile version