Site icon ಉಡುಪಿ ನ್ಯೂಸ್ ಪ್ಲಸ್

ಕಾಪುವಿನಲ್ಲಿ ಅಟಲ್ ಜನ್ಮಶತಾಬಿ ಪ್ರಯುಕ್ತ “ಕಾಪು ಕಡಲ ಪರ್ಬ

ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕಾಪು ಕಡಲ ಪರ್ಬವನ್ನು ಶುಕ್ರವಾರ ಸಂಜೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ನಮ್ಮ ನಡುವೆ ಸೂರ್ಯನಂತಿದ್ದು, ನಿಷ್ಕಳಂಕ ರಾಜಕಾರಣಿಯಾಗಿ ನಮಗೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರ ತುಂಬಿದ್ದ ಕಾಂಗ್ರೆಸ್ ಆಳ್ವಿಕೆಯ ಕಾಲದಲ್ಲಿಯೂ ನಿಷ್ಕಳಂಕ ರಾಜಕಾರಣಿಯಾಗಿಗುರ್ಮೆ ಸುರೇಶ್ ಶೆಟ್ಟಿ ಅವರುಗಳು ಬಿಜೆಪಿ ರಾಜಕಾರಣದಲ್ಲಿ ಆದರ್ಶ ಮತ್ತು ಪ್ರೇರಣಾದಾಯಕ ವ್ಯಕ್ತಿಗಳಾಗಿದ್ದಾರೆ. ಕಾಪುವಿನ ಕಡಲ ಕಿನಾರೆಯಲ್ಲಿ ಅದ್ದೂರಿಯಾಗಿ ಅಟಲ್ ಬಿಹಾರಿ ವಾಜಪೇಯಿ ಆವರ ಜನ್ಮಶತಾಬಿ ಪ್ರಯುಕ್ತ ಆಯೋಜಿಸಿದ ಪರ್ಬ ವಿಶೇಷತೆಯಿಂದಾಗಿ ರಾಜ್ಯಕ್ಕೆ ಮಾದರಿಯಾಗಿದೆ. ಇದು ರಾಷ್ಟ್ರ ಮಟ್ಟದಲ್ಲಿಯೂ ಗುರುತಿಸುವಂತೆ ಆಗಿದೆ ಎಂದು ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ವಾಜಪೇಯಿ ಅವರ ಬದುಕು ಅವರ ಜೀವನ ಅವರ ಸಾಧನೆ ಅದೊಂದು ಮಾದರಿ ಬದುಕು ಎಂದು ರಾಜಕಾರಣ ಹೇಗಿರಬೇಕು ರಾಜ್ಯಕಾರಣಿ ಹೇಗಿರಬೇಕು ಎಂದು ಸ್ಪಷ್ಟ ನಿಲುವು ವಾಜಪೇಯಿ ಅವರು ಹೊಂದಿದ್ದರು ಎಂದು ಹೇಳಿದರು

ಕಾಪು ಕಡಲ ಪರ್ಬದ ಗೌರಾವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಬಿಜೆಪಿಗರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿಆಟಲ್ ಬಿಹಾರಿ ಶತಮಾನೋತ್ಸವ ಸಮಿತಿಯ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ,ಕಾರ್ಕಳ ಶಾಸಕ ಸುನಿಲ್ ವಿ. ಕುಮಾರ್ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, , ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮುಲ್ಕಿ-ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ,ಶಾಸಕ ಯಶ್ ಪಾಲ್ ಸುವರ್ಣ, , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಮಾಜಿ ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ ವೇದಿಕೆಯಲ್ಲಿದ್ದರು.

ಕಾಪು ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವಂದಿಸಿದರು.ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಆಳ್ವ, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ನಿತೇಶ್ ಎಕ್ಕಾರು ನಿರೂಪಿಸಿದರು.

Exit mobile version