ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ತ್ವರಿತಗತಿಯಲ್ಲಿ ಬಂಧಿಸಿದ ಕಾರ್ಕಳ ಠಾಣಾ ಪೋಲಿಸರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಉದ್ದೇಶಿತ ಯೋಜನೆಯಂತೆ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣವಾಗಿ ದೇಶದಾದ್ಯಂತ ಜನರನ್ನು ಆಕರ್ಷಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯಬೇಕಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳಕಾಕರು ನುಗ್ಗುವಂತ ದುಸ್ಥಿತಿಗೆ ಶಾಸಕ ಸುನೀಲ್ ಕುಮಾರ್ ಅವರೇ ನೇರ ಕಾರಣರು. ಕೇವಲ ಚುನಾವಣಾ ದೃಷ್ಟಿಯಿಂದ ಕಂಚಿನ ಬದಲಿಗೆ ಪರಶುರಾಮರ ನಕಲಿ ಪ್ರತಿಮೆ ನಿರ್ಮಿಸಿ ಜನತೆಗೆ ಮೋಸ ಮಾಡಿದ ಕಾರಣದಿಂದಾಗಿ ಇಂದು ಪರಶುರಾಮ ಥೀಮ್ ಪಾರ್ಕ್ ಪದೇ ಪದೇ ಸುದ್ದಿಗೆ ಗ್ರಾಸವಾಗುತ್ತಿದೆ, ಜಿಲ್ಲಾಡಳಿತ ತಕ್ಷಣ ಸೂಕ್ತ ಭದ್ರತೆಯನ್ನು ಒದಗಿಸಿ ಅಲ್ಲಿನ ಸೊತ್ತುಗಳನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಕಳ್ಳತನ ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೋಲಿಸ್ ಇಲಾಖೆಗೆ ಕೃತಜ್ಙತೆ ಸಲ್ಲಿಸಿದ ಉದಯ ಶೆಟ್ಟಿ ಮುನಿಯಾಲು

