Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ಮಾ.4ರಿಂದ 8ರವರೆಗೆ ರಂಗಭೂಮಿ‌ ರಂಗೋತ್ಸವ ಹಿರಿಯ ರಂಗಕರ್ಮಿ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ

ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ‌ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ ಹಿರಿಯ ರಂಗಕರ್ಮಿ, ನಾಟಕಕಾರ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ‌ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎರಡನೆಯ ದಿನ ಗುರುವಾರದಂದು ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಹಾಗೂ ದಿ. ಮಲ್ಪೆ ಮಧ್ವರಾಜ್ ಸ್ಮಾರಕ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಟಕ ಸ್ಪರ್ಧೆಯ ವಿಜೇತ ಸುಮನಸಾ ಕೊಡವೂರು ತಂಡದ “ಈದಿ” ನಾಟಕದ ಮರು ಪ್ರದರ್ಶನ ನಡೆಯಲಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಮಾತನಾಡಿ, ಮಾ.6ರಿಂದ 8ರ ವರೆಗೆ ಪ್ರತಿದಿನ ಸಂಜೆ 6ಗಂಟೆಗೆ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರ ನಾಗಪುರದ ಆಶ್ರಯದಲ್ಲಿ ದಕ್ಷಿಣ ಮಧ್ಯ ಭಾರತ ರಾಜ್ಯಗಳ ಜಾನಪದ ಉತ್ಸವ ನಡೆಯಲಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸಗಢ ರಾಜ್ಯಗಳ ಜಾನಪದ ಕಲಾವೈವಿಧ್ಯ ಪ್ರದರ್ಶನಗೊಳ್ಳಲಿದೆ. ಮಾ.8ರಂದು ಸಂಜೆ 5.30ಕ್ಕೆ ಜಾನಪದ ಪ್ರಶಸ್ತಿ ಪ್ರದಾನ ಹಾಗೂ ಜಾನಪದ ಉತ್ಸವದ ಸಮಾರೋಪ ಜರುಗಲಿದೆ ಎಂದು ತಿಳಿಸಿದರು.

Exit mobile version