Site icon ಉಡುಪಿ ನ್ಯೂಸ್ ಪ್ಲಸ್

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ – ಗುರ್ಮೆ ಸುರೇಶ್ ಶೆಟ್ಟಿ

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. ಓಟ್‌ ಬ್ಯಾಂಕ್‌ ಮತ್ತು ಸ್ಥಳೀಯಾಡಳಿತ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗಿದೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್‌ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಎಂಬುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರಿಚೀಕೆಯಾಗಿದೆ. ಉಡುಪಿ ಜಿಲ್ಲೆಯನ್ನು ಕಡೆಗಣಿಸುತ್ತಿರುವುದು ಖಂಡನೀಯ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ. ಬೆಲೆ ಏರಿಕೆಗೆ ಕಡಿವಾಣ ಬೀಳಲಿದೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ.

Exit mobile version