Site icon ಉಡುಪಿ ನ್ಯೂಸ್ ಪ್ಲಸ್

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ

ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ದಿವಂಗತರು ಮುದ್ರಾಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version