ಉಡುಪಿ :- ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದರು.
ಅವರು,
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಅವಿನಾಶ್ ಕಾಮತ್ ಇವರ ನೇತೃತ್ವದಲ್ಲಿ ಕೂತು ಮಾತಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವು ನಮ್ಮ ಋಣಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ತಿಳಿಸದೆ, ಅದನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಪರಿಪಾಠ ಬೆಳೆಯಬೇಕು ಎಂದರು.
ಅವರ ಬದುಕಿನ ರೋಚಕ ಕಥೆಗಳನ್ನು ವಿವರಿಸುತ್ತಾ ಅವರ ಸಾಧನೆ ಯ ಬಗ್ಗೆ ವಿಸ್ತಾರವಾಗಿ ತಿಳಿಸಿದರು.
ಉಡುಪಿಯ ಶಾರದಾ ಮಂಟಪ ರಸ್ತೆಯ ರಂಗವಲ್ಲಿ ಮನೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಿತು.
ಬದುಕಿನಲ್ಲಿ ನಡೆದ ಹಲವು ಘಟನೆಗಳು, ಕಷ್ಟದಿಂದ ಮೇಲೆದ್ದು ಬಂದ ರೋಚಕ ಕಥೆಗಳು ಸಭಿಕರಿಗೆ ಭಾವನಾತ್ಮಕವಾಗಿ ಕಥೆಗಳ ಮೂಲಕ ವಿವರಿಸಿದರು.
ಕಾರ್ಯಕ್ರಮವನ್ನು ನಿರೂಪಕ ಅವಿನಾಶ್ ಕಾಮತ್ ನೆರವೇರಿಸಿ ಕೊಟ್ಟರು.
ಕಾರ್ಯಕ್ರಮದ ಕೊನೆಯಲ್ಲಿ ಜೀವನ್ ರಾಮ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್ ,ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ , ಕಸಾಪ ಉಡುಪಿ ತಾಲೂಕಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್
ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಧ್ಯಾ ಶೆಣೈ, ಶಿಲ್ಪಾ ಜೋಶಿ ರಾಘವೇಂದ್ರ ಪ್ರಭು ಕರ್ವಾಲು, ಸಿದ್ದಬಸಯ್ಯ ಸ್ವಾಮಿ ಚಿಕ್ಕ ಮಠ ಇನ್ನಿತರರು ಉಪಸ್ಥಿತರಿದ್ದರು.

