Site icon ಉಡುಪಿ ನ್ಯೂಸ್ ಪ್ಲಸ್

ಸಂಸದ ಬಿ ವೈ ರಾಘವೇಂದ್ರ ಕುಟುಂಬ ಕಾಪು ಮಾರಿಯಮ್ಮ ಸನ್ನಿದಾನಕ್ಕೆ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಇಂದು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರನ್ನು ಆತ್ಮೀಯವಾಗಿ ಭರಮಾಡಿಕೊಂಡರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ವ್ಯವಸ್ಥಾಪನಾ ಸಮಿತಿ ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Exit mobile version