ಶಿರ್ವ:ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು, ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ಈ ಸಾಧನೆ ಶಾಲೆಯ ಶೈಕ್ಷಣಿಕ ಗುಣಮಟ್ಟ ಮತ್ತು ಶಿಕ್ಷಕರ ಸಮರ್ಪಣೆಯ ಪ್ರತಿಬಿಂಬವಾಗಿದೆ.
ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಸ್ಥಾನವನ್ನು 90.24% ಅಂಕಗಳೊಂದಿಗೆ ಆಯಿಶಾ ಇನಾಝ್, ದ್ವಿತೀಯ ಸ್ಥಾನವನ್ನು 90% ಅಂಕಗಳೊಂದಿಗೆ ಬೀಬೀ ಶಬೀಬಾ ಮರ್ವ ,ತೃತೀಯ ಸ್ಥಾನವನ್ನು ಇಕ್ರ ಹಾಗೂ ಮುಸಾಬ್ ಸಂಯುಕ್ತವಾಗಿ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲವೇ ಈ ಯಶಸ್ಸಿನ ಹಿಂದೆ ಮುಖ್ಯ ಕಾರಣವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶಗಳನ್ನು ಸಾಧಿಸಲು ಶಾಲೆ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
