Site icon ಉಡುಪಿ ನ್ಯೂಸ್ ಪ್ಲಸ್

ಎ. 26: ‘ ರಾಜಾಪುರ ಸಾರಸ್ವತ ಕ್ರೆ. ಕೋ-ಆಪ್. ಸೊಸೈಟಿ ಸಹಕಾರ ಸಿಂಧೂರ’ ಉದ್ಘಾಟನೆ, ತ್ರಿಂಶತಿ ಸಂಭ್ರಮ

ರಾಜಾಪುರ ಸಾರಸ್ವತ ಕ್ರೆ. ಕೋ-ಆಪ್. ಸೊಸೈಟಿ ವತಿಯಿಂದ ಕಾರ್ಕಳದ ಜೋಡುರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ‘ಸಹ ತ್ವ ಕಾರ ಸಿಂಧೂರ’ ಉದ್ಘಾಟನೆ ಮತ್ತು ಸೊಸೈಟಿಯ ತ್ರಿಂಶತಿ ಸಂಭ್ರಮ ಎ. 26ರಂದು ಬೆಳಗ್ಗೆ 10.30ಕ್ಕೆ ಸೊಸೈಟಿ ಆವರಣದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಗೋವಾ, ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾ‌ರ್ ನೆರವೇರಿಸಲಿದ್ದಾರೆ. ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.

ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಳರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನಿಲ್ ಕುಮಾರ್, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ

ಉದಯ ಕುಮಾರ್ ಶೆಟ್ಟಿ ಮುನಿಯಾಲು ಭಾಗವಹಿಸುವರು.ನಿರ್ದೇಶಕ ಸದಾಶಿವ ಪ್ರಭು ಬಿ., ಮಂಗಳೂರು ಪರಮಪೂಜ್ಯ ಶ್ರೀಮರ್ ಶಿವಾನಂದ ಸರಸ್ವತೀ ಸ್ವಾಮಿ ಮೂರಾನ್ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ಕವಳೆ, ಗೋವಾ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 1 ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಉಡುಪಿ ಗೀತಾಂಜಲಿ ಸಿಲ್ಟ್ ಉದ್ಯಮಿ ಸಂತೋಷ್ ವಾಗ್ಗೆ ಅತಿಥಿಗಳಾಗಿ ಉಪಸ್ಥಿತರಿರುವರು. ಗೌರವ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯಾ ಕೆ. ಆರ್., ಕುಂದಾಪುರ ವಿಭಾಗ ಸಹಕಾರಿ ಸಂಘ ಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಶ್ರೀಕ್ಷೇತ್ರ ಅಡಪಾಡಿ ಪಳ್ಳಿ ಧರ್ಮದರ್ಶಿ ಪುಂಡಲೀಕ ನಾಯಕ್, ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕೇಸರ ಚೇತನ್ ನಾಯಕ್ ಭಾಗವಹಿಸಲಿದ್ದಾರೆ.

ಪೂರ್ವಾಹ್ನ 9.30ರಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’, ಅಪರಾಹ್ನ 3ರಿಂದ ತೆಂಕು-ಬಡಗುತಿಟ್ಟಿನ ಪ್ರಸಿದ್ದ ಕಲಾವಿದರ ಸಮ್ಮಿಲ ನದಲ್ಲಿ ‘ಕರ್ಣಾರ್ಜುನ – ಸುಧನ್ವಾರ್ಜುನ’ ಯಕ್ಷಗಾನ ಬಯಲಾಟ ಜರಗಲಿದೆ ಎಂದು ಸೊಸೈಟಿ ಪ್ರಕಟನೆ ತಿಳಿಸಿದೆ

Exit mobile version