Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 2 ಅಂಗನವಾಡಿಯ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಇಂದು ಬೆಳಿಗ್ಗೆ ಶಿಲಾನ್ಯಾಸ ನೆರೆವೇರಿತು.ಸ್ಥಳೀಯ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸತೀಶ್ ಮಂಚಿ,ದಿಲೀಪ್ ಹೆಗ್ಡೆ, ಮಾಜಿ ನಗರಸಭಾ ಸದಸ್ಯರು,ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕೆ 40 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳ್ಳುವಲ್ಲಿ ಮುತುವರ್ಜಿವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಹಾಗೂ ಅನುದಾನ ಬಿಡುಗಡೆ ಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದರು

Exit mobile version