Site icon ಉಡುಪಿ ನ್ಯೂಸ್ ಪ್ಲಸ್

ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ ಹಾಫಿಝ್ ಆಗುವ ಸುವರ್ಣಾವಕಾಶ : ದಾಖಲಾತಿ ಆರಂಭ 2026-27

ಶಿರ್ವ, ಉಡುಪಿ: ಆಧುನಿಕ ಶಿಕ್ಷಣದೊಂದಿಗೆ ಧಾರ್ಮಿಕ ಮೌಲ್ಯಗಳನ್ನು ಸಮನ್ವಯಗೊಳಿಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ವಿಶೇಷ ಹೆಜ್ಜೆ ಇಡುತ್ತಿರುವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ ಇದೀಗ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಆರಂಭಗೊಂಡಿದೆ

ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣದ ಜೊತೆಗೆ ಹಿಫ್ಝ್ ಶಿಕ್ಷಣಕ್ಕೂ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಾಮಾನ್ಯ ವಿದ್ಯಾಭ್ಯಾಸದೊಂದಿಗೆ ವಿದ್ಯಾರ್ಥಿಗಳು ಪವಿತ್ರ ಕುರ್‌ಆನ್ ಹಿಫ್ಝ್ ಅಭ್ಯಾಸ ಮಾಡುತ್ತಿದ್ದು, ಸುಮಾರು ಮೂರು ವರ್ಷಗಳಲ್ಲಿ ಹಾಫಿಝ್ ಆಗುವ ಅವಕಾಶವನ್ನು ಪಡೆಯುತ್ತಿದ್ದಾರೆ. ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಒಂದೇ ವೇದಿಕೆಯಲ್ಲಿ ಕಲಿಯುವ ಅವಕಾಶ ಇಲ್ಲಿನ ವಿಶೇಷತೆಯಾಗಿದೆ.

ವಿದ್ಯಾರ್ಥಿಗಳಲ್ಲಿ ಉತ್ತಮ ನಡತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವತ್ತ ಶಾಲೆ ಹೆಚ್ಚಿನ ಗಮನ ಹರಿಸುತ್ತಿದೆ. ಧಾರ್ಮಿಕ ಶಿಕ್ಷಣದೊಂದಿಗೆ ಲೋಕಜ್ಞಾನಕ್ಕೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸೂಕ್ತ ವಾತಾವರಣ ಕಲ್ಪಿಸಲಾಗಿದೆ.

ಬಾಲಕರಿಗಾಗಿ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯೂ ಲಭ್ಯವಿದೆ. ಸುರಕ್ಷಿತ ಹಾಗೂ ಶಿಸ್ತುಬದ್ಧ ವಾತಾವರಣದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮತ್ತು ಹಿಫ್ಝ್ ಅಭ್ಯಾಸ ಮುಂದುವರಿಸಬಹುದಾಗಿದೆ. ವಿದ್ಯಾರ್ಥಿಗಳ ಆರೈಕೆ ಮತ್ತು ಮಾರ್ಗದರ್ಶನಕ್ಕಾಗಿ ಅನುಭವಸಂಪನ್ನ ಶಿಕ್ಷಕರ ತಂಡ ಕಾರ್ಯನಿರ್ವಹಿಸುತ್ತಿದೆ.

ಕಳೆದ ಹಲವು ವರ್ಷಗಳಿಂದ ಉತ್ತಮ ಶೈಕ್ಷಣಿಕ ಸಾಧನೆಗಳ ಮೂಲಕ ಪೋಷಕರ ವಿಶ್ವಾಸ ಗಳಿಸಿರುವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ ಇದೀಗ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವಂತಹ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ
7338077962/ 9141222432

Exit mobile version