ಉಡುಪಿ ನ್ಯೂಸ್ ಪ್ಲಸ್

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು  ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಅವರು ಮಾರುಕಟ್ಟೆಯ ಕಟ್ಟಡದಲ್ಲಿರುವ ವಿವಿಧ ಕುಂದುಕೊರತೆಗಳು, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಲ್ಲಿದ್ದ ಮೀನುಗಾರ ಮಹಿಳೆಯರೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ ದುರಸ್ತಿಗೊಳಿಸುವುದಾಗಿ ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Exit mobile version