ಶಿರ್ವದ ಫೈಝುಲ್ ಇಸ್ಲಾಂ ಪಬ್ಲಿಕ್ ಶಾಲೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.
ಶಾಲೆಯ 21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಸಾಧಿಸಿದ್ದಾರೆ. ಈ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ಶಾಲೆಗೆ “ಅಭಿನಂದನಾ ಪತ್ರ” ನೀಡಿ ಗೌರವಿಸಲಾಗಿದೆ.
ಶಾಲೆಯ ಈ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ಪರಿಶ್ರಮ ಮತ್ತು ಸಹಕಾರವೇ ಕಾರಣವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗವು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ವರ್ಷಗಳಲ್ಲಿಯೂ ಇದೇ ರೀತಿಯ ಉತ್ತಮ ಫಲಿತಾಂಶವನ್ನು ಸಾಧಿಸುವ ಸಂಕಲ್ಪ ವ್ಯಕ್ತಪಡಿಸಿದರು.
“21 ವಿದ್ಯಾರ್ಥಿಗಳು – 100% ಫಲಿತಾಂಶದೊಂದಿಗೆ ಶಾಲೆಯ ಈ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯಾಗಿದೆ.
