ಉಡುಪಿ ನ್ಯೂಸ್ ಪ್ಲಸ್

ದಂಡತೀರ್ಥ: ಭರತನಾಟ್ಯಂ, ಯೋಗ ತರಗತಿ ಉದ್ಘಾಟನೆ

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಭರತನಾಟ್ಯ ಹಾಗೂ ಯೋಗ ತರಗತಿಗಳನ್ನು ಅಮೇರಿಕದ ಪ್ರಸಿದ್ಧ ವೈದ್ಯರೂ, ಉಳಿಯಾರಗೋಳಿ, ದಂಡತೀರ್ಥ ಪ್ರತಿಷ್ಠಾನದ ಅಧ್ಯಕ್ಷರಾದ ಡಾll ಸೀತಾರಾಮ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು,ಬಳಿಕ ಮಾತನಾಡಿ ನಮ್ಮ ಭಾರತೀಯ ಪರಂಪರೆಯಲ್ಲಿ ಭರತನಾಟ್ಯಕ್ಕೆ ವಿಶೇಷ ಸ್ಥಾನಮಾನವಿದ್ದು ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸುತ್ತದೆ.ಹಾಗೆಯೇ ನಮ್ಮ ದೇಶದ ಪರಂಪರೆಯ ಯೋಗವು ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದಿರುವುದು ಮಾತ್ರವಲ್ಲದೆ, ವ್ಯಕ್ತಿಯ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ, ಆದುದರಿಂದ ವಿದ್ಯಾರ್ಥಿಗಳು ಇವುಗಳಲ್ಲಿ ತೊಡಗಿಕೊಳ್ಳಬೇಕೆಂದು ಹೇಳಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾ l ಕೆ .ಪ್ರಶಾಂತ್ ಶೆಟ್ಟಿಯವರು,ವಿದ್ಯಾರ್ಥಿಗಳು ಕೇವಲ ಕಲಿಕೆಯಲ್ಲಿ ಮಾತ್ರವಲ್ಲದೆ ಇಂತಹ ಚಟುವಟಿಕೆಯಲ್ಲಿಯೂ ಕ್ರಿಯಾಶೀಲವಾಗಿ ತೊಡಗಿಕೊಂಡು ಪ್ರತಿಭಾನ್ವಿತರು ಹಾಗೂ ಸ್ವಾವಲಂಬಿಯಾಗಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಮಂಗಳೂರಿನ ಯುವ ಉದ್ಯಮಿ ನಿಹಾಲ್ ಶೆಟ್ಟಿ,ಆಡಳಿತ ಮಂಡಳಿಯ ಸದಸ್ಯೆ ಡಾ ll ಪನ್ನ ಪಿ ಶೆಟ್ಟಿ,ನೃತ್ಯ ವಿದುಷಿ ತೃಪ್ತಿ ನಾಯಕ್, ಯೋಗ ತರಬೇತುದಾರೆ ವಿದಿಶಾ,ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ,ಪ್ರಾಂಶುಪಾಲ ನೀಲಾನಂದ ನಾಯ್ಕ್,ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ಉಪಸ್ಥಿತರಿದ್ದರು.
    ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಸ್ವಾಗತಿಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಜಲಕ್ಷ್ಮೀ ರಾವ್ ವಂದಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ವಾಣಿ ನಿರ್ವಹಿಸಿದರು.

Exit mobile version