Site icon ಉಡುಪಿ ನ್ಯೂಸ್ ಪ್ಲಸ್

ಕಿನಾರ ಶಾಲೆ ಶಿಕ್ಷಕ ರಕ್ಷಕ ಸಂಘದ ಸಭೆ

ದಿನಾಂಕ 04-07-2026, ಶನಿವಾರ, ಕಿನಾರ ಗ್ಲೋಬಲ್ ಶಾಲೆ ಎರ್ಮಾಳ್ ತೆಂಕ ಶಿಕ್ಷಣ ಸಂಸ್ಥೆ ಯಲ್ಲಿ ಶಿಕ್ಷಕ ರಕ್ಷಕ ಸಂಘದ (PTA) ಸಭೆ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ ಆಡಳಿತಾಧಿಕಾರಿಯಾಗಿರುವ ಶ್ರೀಮತಿ ಸೌಜನ್ಯ ಶೆಟ್ಟಿ ಅವರು ಭಾಗವಹಿಸಿ ಮಕ್ಕಳಲ್ಲಿ ಮೊಬೈಲ್ ಬಳಕೆಯ ಪರಿಣಾಮ, ಹೋಲಿಕೆಯ ಪರಿಣಾಮ (Comparison Effect), ಮಕ್ಕಳ ಸುರಕ್ಷತೆ ಸೇರಿದಂತೆ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ಪೋಷಕರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು. ಶಾಲಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್, ಮುಖ್ಯೋಪಾಧ್ಯಾಯಿನಿ ಪ್ರೀತಿ ಸುವರ್ಣ, PTA ಪ್ರತಿನಿಧಿ ಮೊಹಮ್ಮದ್ ಸಲೀಂ ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾತನಾಡಿದರು. ಉಪ ಮುಖ್ಯೋಪಾಧ್ಯಾಯನಿ ಜ್ಯೋತಿ ರಾಜೇಶ್ ಶಾಲಾ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.
ಶಿಕ್ಷಕಿ ಕವಿತ ಜಿ ಪುತ್ರನ್ ಸ್ವಾಗತಿಸಿ, ಅಶ್ವಿನಿ ಆರ್ ವಂದಿಸಿದರು. ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Exit mobile version