Site icon ಉಡುಪಿ ನ್ಯೂಸ್ ಪ್ಲಸ್

ಉಚ್ಚಿಲ ದಸರಾ – 2022 ಉಡುಪಿ ವೈಧ್ಯಾಧಿಕಾರಿಯವರಿಂದ ಚಾಲನೆ

ದಕ ಮೊಗವೀರ ಮಹಾಜನ ಸಂಘ ಅಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಸೆಪ್ಟಂಬರ್ ೨೬ರಿಂದ ಅಕ್ಟೋಬರ್ ೫ರವರೆಗೆ ನಡೆಯುವ ನವರಾತ್ರಿ ಉತ್ಸವ “ಉಚ್ಚಿಲ ದಸರಾ ಉತ್ಸವ-೨೦೨೨”ಕ್ಕೆ ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ. ಶ್ರೀತೇಜ ಕೂರ್ಮಾ ರಾವ್‌ರವರು ದೀಪ ಬೆಳಗಿಸಿ ಸೋಮವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸಮೀಪದಲ್ಲಿ ನೂತನವಾಗಿ ನಿರ್ಮಾಣವಾದ ಸುಸಜ್ಜಿತ ಶ್ರೀಮತಿ ಶಾಲಿನಿ ಡಾ. ನಾಡೋಜ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದ ಮಾತೆಯ ವಿಗ್ರಹಗಳ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾ ಉತ್ಸವವ ಸಂಪನ್ನಗೊAಡಿತು. ಬೆಳಿಗ್ಗೆ ನವದುರ್ಗೆಯರು ಮತ್ತು ಶಾರದಾ ದೇವಿಯ ಪ್ರತಿಷ್ಠಾಪನಾ ಕಾರ್ಯಕ್ರಮ ನೂತನ ಸಭಾಂಗಣದಲ್ಲಿ ನೆರವೇರಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾರ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣು ಮೂರ್ತಿ ಉಪಾಧ್ಯಾಯರವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಏಕ ಕಾಲದಲ್ಲಿ ನವದುರ್ಗೆಯರು ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆ ನೆರವೇರಿತು. ಈ ಸಂದರ್ಭ ಮೊಗವೀರ ಮುಖಂಡ ನಾಡೋಜಾ ಜಿ ಶಂಕರ್, ಕಾಪು ಶಾಸಕ ಲಾಲಾಜಿ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ.ಅಮೀನ್, ಕ್ಷೇತ್ರಾಧ್ಯಕ್ಷ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಸದಸ್ಯರಾದ ಗಂಗಾಧರ ಸುವರ್ಣ ಎರ್ಮಾಳ್, ಶಾಂತಾ ಇಲೆಕ್ಟಿçಕಲ್ಸ್ನ ಶ್ರಿಪತಿ ಭಟ್, ಶಿಲ್ಪಾ ಜಿ ಸುವರ್ಣ, ಕಾಪು ಗಂಗಾಧರ ಸುವರ್ಣ, ಕಾಪು ಪೋಲಿಸ್ ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಸತೀಶ್ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

Exit mobile version