Site icon ಉಡುಪಿ ನ್ಯೂಸ್ ಪ್ಲಸ್

ಗಾಂಧಿ ಜಯಂತಿ ಅಂಗವಾಗಿ ಕಾಪು ಬ್ಲಾಕ್ ಮಟ್ಟದ ಕ್ರೀಡಾಕೂಟ ಬ್ಲಾಕ್‌ನಿಂದ ಗ್ರಾಮೀಣ ಜೋಡೋ ಕಾರ್ಯಕ್ರಮ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಪು ಬ್ಲಾಕ್ ಕಾಂಗ್ರೆಸ್ ಸಂಘಟನೆಯನ್ನು ಗ್ರಾಮೀಣ ಮಟ್ಟದವರೆಗೆ ಮತ್ತಷ್ಟು ಬಲಪಡಿಸುವುದು, ಗ್ರಾಮೀಣ ಪ್ರದೇಶದ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಂಘಟನೆಯೊಂದಿಗೆ ನಿರಂತರವಾಗಿ ಸಂಪರ್ಕಿಸುವುದು ಮತ್ತು ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗಾಂಧೀಜಿಯವರ ಸತ್ಯ, ಅಹಿಂಸೆ, ಏಕತೆ ಹಾಗೂ ಸಾಮರಸ್ಯದ ಸಂದೇಶವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವುದರ ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಾಂಧವ್ಯ ಮತ್ತು ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವುದು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರು ಸಾರಥ್ಯ ವಹಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗಾಂಧೀಜಿಯವರ ಜೀವನ, ಸತ್ಯ ಮತ್ತು ಅಹಿಂಸೆಯ ಸಂದೇಶದ ಜೊತೆಗೆ ಕ್ರೀಡೆಯ ಮಹತ್ವದ ಕುರಿತು ಅವರು ಮಾತನಾಡಿದರು.

ಕರ್ನಾಟಕ ಸರಕಾರದ ಆರೋಗ್ಯ ಸಚಿವರು ಶ್ರೀ ಯು.ಟಿ. ಖಾದರ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಯುವಜನರು ಹಾಗೂ ಪಕ್ಷದ ಕಾರ್ಯಕರ್ತರು ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆರೋಗ್ಯಕರ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೈ. ಸುಕುಮಾರ್ ಅವರು ಮಾತನಾಡಿ, ಗಾಂಧಿ ಜಯಂತಿಯಂತಹ ಮಹತ್ವದ ದಿನವನ್ನು ಕಾರ್ಯಕರ್ತರೊಂದಿಗೆ ಕ್ರೀಡಾಕೂಟದ ಮೂಲಕ ಆಚರಿಸುವುದು ಪರಸ್ಪರ ಸ್ನೇಹ, ಒಗ್ಗಟ್ಟು ಮತ್ತು ಸಂಘಟನೆಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಸಹಕಾರಿಯಾಗುತ್ತದೆ ಎಂದರು.

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಪು ಬ್ಲಾಕ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.

ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಕ್ರೀಡಾಕೂಟದ ಅಂತ್ಯದಲ್ಲಿ ವಿವಿಧ ಗ್ರಾಮೀಣ ಕಾಂಗ್ರೆಸ್ ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ವಿಜೇತ ಹಾಗೂ ರನ್ನರ್‌ಅಪ್ ತಂಡಗಳಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು.

ಮಹಿಳೆಯರ ತ್ರೋಬಾಲ್ ಪಂದ್ಯಾವಳಿ:
🥇 ಪ್ರಥಮ ಸ್ಥಾನ – ಶಿರ್ವ ಗ್ರಾಮೀಣ ಕಾಂಗ್ರೆಸ್
🥈 ದ್ವಿತೀಯ ಸ್ಥಾನ – ಹೆಜಮಾಡಿ ಗ್ರಾಮೀಣ ಕಾಂಗ್ರೆಸ್

ಕ್ರಿಕೆಟ್ ಪಂದ್ಯಾವಳಿ:
🥇 ಪ್ರಥಮ ಸ್ಥಾನ – ಕೋಟೆ ಗ್ರಾಮೀಣ ಕಾಂಗ್ರೆಸ್
🥈 ದ್ವಿತೀಯ ಸ್ಥಾನ – ಬೆಳ್ಳೆ ಗ್ರಾಮೀಣ ಕಾಂಗ್ರೆಸ್

ವಿಜೇತ ತಂಡಗಳಿಗೆ ಅಭಿನಂದನೆ ಸಲ್ಲಿಸಿದ ಗಣ್ಯರು, ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿ ಸಂಘಟನೆಯ ಒಗ್ಗಟ್ಟು, ಸ್ನೇಹ ಹಾಗೂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿದ ಎಲ್ಲಾ ತಂಡಗಳಿಗೂ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಂಎಲ್‌ಸಿ ಶ್ರೀ ಐವನ್ ಡಿಸೋಜಾ, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲು ಪ್ರಮೋದ್ ಚಂದ್ರ ಅಧ್ಯಕ್ಷರು ಹೆಜಮಾಡಿ ಗ್ರಾಮೀಣ ಸಮಿತಿ , ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ನಿಯಾಜ್, ಕಾಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶಾಂತಲತಾ ಶೆಟ್ಟಿ, ಕಾಪು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ದಿವಾಕರ್ ಶೆಟ್ಟಿ, ಕೆಪಿಸಿಸಿ ಕೋಆರ್ಡಿನೇಟರ್ ಶ್ರೀ ಅಬ್ದುಲ್ ಅಜೀಜ್, ಉಡುಪಿ ಜಿಲ್ಲಾ ಮೀನುಗಾರಿಕಾ ಘಟಕದ ಅಧ್ಯಕ್ಷರಾದ ಶ್ರೀ ವಿಶ್ವಾಸ್ ವಿ. ಅಮೀನ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರಮೋದ್ ಚಂದ್ರ, ಪಡುಬಿದ್ರಿ ಸೊಸೈಟಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ವೈ. ಸುಧೀರ್ ಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಸುಧೀರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀ ಪ್ರಶಾಂತ್ ಜತ್ತಣ್ಣ, ಶ್ರೀ ಫಾರೂಕ್ ಚಂದ್ರನಗರ, ಶ್ರೀ ರಿಯಾಜ್ ಮುದರಂಗಡಿ, ಶ್ರೀ ರಚನ್ ಸಾಲಿಯಾನ್, ಶ್ರೀ ಕೇಶವ ಸಾಲಿಯಾನ್, ಶ್ರೀ ಶರೀಫ್ ಉಸ್ಮಾನ್, ಶ್ರೀ ಸನ ಇಬ್ರಾಹಿಂ, ಶ್ರೀ ಸಂತೋಷ್ ಪಡುಬಿದ್ರಿ, ಶ್ರೀ ಕಬೀರ್ ಹೆಜಮಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Exit mobile version