ಉಡುಪಿ ನ್ಯೂಸ್ ಪ್ಲಸ್

ಉಡುಪಿ ಉಚ್ಚಿಲ ದಸರಾ’ ವೈಭವಕ್ಕೆ ಅದ್ದೂರಿ ಚಾಲನೆ; ದಸರಾ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ.

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಭವಪೂರಿತ ‘ಉಡುಪಿ ಉಚ್ಚಿಲ ದಸರಾ-2026’ಕ್ಕೆ ಅದ್ದೂರಿಯ ಚಾಲನೆ ನೀಡಲಾಯಿತು.

ನಾಡೋಜ ಜಿ.ಶಂಕರ್ ಅವರ ಸಾರಥ್ಯದಲ್ಲಿ ಅ.21ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್‌ ಸಭಾಂಗಣದಲ್ಲಿ ನಡೆಯಲಿರುವ ಈ 5ನೇ ವರ್ಷದ ದಸರಾ ಮಹೋತ್ಸವವು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬಹಳಷ್ಟು ವಿಜೃಂಭಣೆಯಿಂದ ಕಂಗೊಳಿಸಲಿದೆ.

‘ಉಡುಪಿ ಉಚ್ಚಿಲ ದಸರಾ-2025’ ಹಾಗು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ. ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ನವರಾತ್ರಿ ಆಚರಣೆಯು ಕೇವಲ ಒಂದು ಧಾರ್ಮಿಕ ಹಬ್ಬವಲ್ಲ, ಅದು ಪ್ರತಿಯೊಬ್ಬ ವ್ಯಕ್ತಿಯೊಳಗಿನ ಧೈರ್ಯ, ಶಕ್ತಿ ಹಾಗೂ ಜ್ಞಾನವನ್ನು ಜಾಗೃತಗೊಳಿಸುವ ದಿವ್ಯ ಪರ್ವವಾಗಿದೆ” ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ , ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರುಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾ ಶರತ್, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ, ನಾಲ್ಕುಪಟ್ಟ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣ ಕರ್ಕೇರ, ಶ್ರೀಪತಿ ಭಟ್‌ ಉಚ್ಚಿಲ, ದಿನೇಶ್‌ ಎರ್ಮಾಳು, ವಾಸುದೇವ ಸಾಲ್ಯಾನ್‌, ಗುಂಡು ಬಿ ಅಮೀನ್‌, ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್‌ ಅಮೀನ್‌, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು,

Exit mobile version