ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ’ ಯೋಜನೆಗಳ ಯಶಸ್ಸನ್ನು ಬಿಂಬಿಸುವ ಮತ್ತು ಸಾರ್ವಜನಿಕರಿಗೆ ಇದರ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಬೃಹತ್ ಸಮಾರಂಭವು ಇಂದು ಹೇಜಮಾಡಿಯಲ್ಲಿ ಅತ್ಯಂತ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ಜರುಗಿತು.

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಅವರು ಉದ್ಘಾಟಿಸಿದರು. ಮಾಜಿ ಸಚಿವರಾದ ವಿಜಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿನಯ್ ಕುಮಾರ್ ಸೊರಕೆ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ದ ಭರವಸೆಯಂತೆ, ಸರ್ಕಾರ ಅಧಿಕಾರಕ್ಕೆ ಬಂದ (ಮೂರು ತಿಂಗಳೊಳಗೆ) ‘ಶಕ್ತಿ’, ‘ಅನ್ನಭಾಗ್ಯ’, ‘ಗೃಹಜ್ಯೋತಿ’, ‘ಗೃಹಲಕ್ಷ್ಮಿ’ ಮತ್ತು ‘ಯುವನಿಧಿ’ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ತೊಡಕಿಲ್ಲದೆ ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರ ದಾಖಲೆ ಬರೆಯಿತು . ವಿರೋಧ ಪಕ್ಷಗಳ ಟೀಕೆಗಳನ್ನು ಮೀರಿ ನಿಂತು ಕೊಟ್ಟ ಮಾತಿನಂತೆ ನಡೆದುಕೊಂಡ ಹೆಮ್ಮೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಸುಧೀರ್ ಕುಮಾರ್ ಮರೋಳಿ ಅವರು ಪ್ರಮುಖ ಭಾಷಣ ಮಾಡಿದರು. ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣ ಅಧ್ಯಕ್ಷರಾದ ವೈ. ಸುಕುಮಾರ್, ಪಡುಬಿದ್ರಿ ಕೋ-ಆಪ್ ಅಗ್ರಿಕಲ್ಚರ್ ಸೊಸೈಟಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಕೆಪಿಸಿಸಿ ಸಂಯೋಜಕರಾದ ಅಬ್ದುಲ್ ಅಜೀಜ್ ಹೆಜಮಾಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಶೇಕಬ್ಬ ಕೋಟೆ, ರಾಜು ಹೆಜಮಾಡಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಮನ್ ಕೋಟಿಯಾನ್ ನಾಡಿಕುದೂರು, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಿಯಾಜ್, ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಕಾರ್ಯಾಧ್ಯಕ್ಷರಾದ ರಿಯಾಜ್ ಅವರು ಉಪಸ್ಥಿತರಿದ್ದರು.
ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಸುಧೀರ್ ಕಾರ್ಕೇರ, ರಿಯಾ ವಿನುತಾ ಡಿ’ಸೋಜಾ, ಹಸನಬ್ಬ ಶೇಖ್, ಕೀರ್ತಿ ಪ್ರಶಾಂತ್ ಜತ್ತಣ್ಣ ಅವರು ಭಾಗವಹಿಸಿದ್ದರು.
ಸಮಾಜಮುಖಿ ಕೆಲಸ ಮಾಡಿದ ಆಶಾ ಕಾರ್ಯಕರ್ತರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದವರನ್ನುಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹೆಜಮಾಡಿಯ ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ ಅವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಕೇಶವ ಸಾಲಿಯಾನ್ ಅವರು ವಂದಿಸಿದರು. ಸಂತೋಷ್ ಪಡುಬಿದ್ರಿ ಅವರು ಕಾರ್ಯಕ್ರಮ ನಿರ್ವಹಿಸಿದರು.