Site icon ಉಡುಪಿ ನ್ಯೂಸ್ ಪ್ಲಸ್

ಕಾಪುವಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಕಾಪು ಪುರಸಭೆ ಹಾಗೂ ವಿವಿಧ ಸಂಘಟನೆಗಳು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಆಂದೋಲನವನ್ನು ಭಾನುವಾರ ಕಾಪು ಬೀಚ್‌ನಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಕಾಪು ಕ್ಷೇತ್ರದಾದ್ಯಂತ ಈ ಕಾರ್ಯಕ್ರಮ ಪ್ರಾರಂಭಗೊAಡಿದೆ ಎಂದರು. ಮಹಾತ್ಮಾ ಗಾಂಧಿ ಮತ್ತು ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಗಣ್ಯರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಕಾಪು ತಹಶಿಳ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಉಪ ತಹಶೀಲ್ದಾರ್ ರವಿಶಂಕರ್, ಪುರಸಭಾಧಿಕಾರಿ ವೆಂಕಟೇಶ ನಾವಡ. ಶಿಲ್ಪ ಜಿ ಸುವರ್ಣ, ಗಂಗಾಧರ ಸುವರ್ಣ, ವಿದ್ಯಾಂಗ ಇಲಾಖಾಧಿಕಾರಿ ಶಂಕರ್ ಸುವರ್ಣ, ಪರಿಸರ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪುರಸಭಾ ಸದಸ್ಯರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

 

Exit mobile version