ಮಂಗಳೂರು:ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ವಿನಯ್ ಕುಮಾರ್ ಸೊರಕೆ, ಮೊಹಿದಿನ್ ಬಾವ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ಸೇರಿದಂತೆ ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.


