Site icon ಉಡುಪಿ ನ್ಯೂಸ್ ಪ್ಲಸ್

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

YouTube Poster

 ಕಾಪು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬದ ಆಚರಣೆ ಸಮಿತಿ ಮಂಗಳವಾರ ಕಾಪು ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಆಯೋಜಿಸಿದ 67ನೇ ಕನ್ನಡ ರಾಜ್ಯೋತ್ಸವ ಧ್ವಜ ರೋಹನವನ್ನು ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ನೆರವೇರಿಸಿದರುಅವರು ಈ ಸಂದರ್ಭ ಮಾತನಾಡಿ ಕನ್ನಡ ಭಾಷೆ ಈಗ ಅವನತಿಯತ್ತ ಸಾಗುತ್ತಿದ್ದು ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು ಕಾಪು ಶಾಸಕ ಲಾಲಾಜಿ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಈ ಸಂದರ್ಭದಲ್ಲಿ 27 ಫಲಾನುಭವಿಗಳಿಗೆ ಮಂಜೂರತಿ ಪತ್ರ ನೀಡಲಾಯಿತು. ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಯಿತು. ಒಟ್ಟು 405 ಬೀದಿ ಬದಿ ವ್ಯಾಪಾರಿಗಳಿಗೆ ತಲಾ ಹತ್ತು ಸಾವಿರದಂತೆ ಬ್ಯಾಂಕ್ ಮುಖಾಂತರ ಸಾಲ ಒದಗಿಸಲಾಗಿದೆ. ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದಈ ಸಂದರ್ಭದಲ್ಲಿ ಕಾಪು ಪುರಸಭಾ ಅಧಿಕಾರಿ ವೆಂಕಟೇಶ್ ನವಾಡ ಕಾಪು ವೃತ್ತ ನಿರೀಕ್ಷಕ ಕೆಸಿ ಪುವಯ್ಯ ಕಾಪು ಠಾಣಾ ಅಧಿಕಾರ ಶ್ರೀಶೈಲ ಪಡವಿದ್ರಿ ಠಾಣಾ ಅಧಿಕಾರಿ ಪುರುಷೋತ್ತಮ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕ ಅಧ್ಯಕ್ಷ ಪುಂಡಲಿಕ ಪುರಸಭಾ ಅಧಿಕಾರಿಗಳು ಪುರಸಭಾ ಸದಸ್ಯರು ಮತ್ತು ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು 

Exit mobile version