ಉಡುಪಿ ನ್ಯೂಸ್ ಪ್ಲಸ್

ವಿಕೃತಕಾಮಿ ಉಮೇಶ್ ರೆಡ್ಡಿಗೆ; ಮರಣದಂಡನೆ ರದ್ದು

ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ್ದಸಿಜೆಐ ಉದಯ್ ಲಲಿತ್ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕೆಯನ್ನು ರದ್ದುಗೊಳಿಸಿದೆ.ಉಮೇಶ್ ರೆಡ್ಡಿಯ ಮರಣದಂಡನೆಯನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ 30 ವರ್ಷ ಜೀವಾವಧಿ ಶಿಕ್ಷೆ ವಿಧಿಸಿದೆ.ಆತನನ್ನು ಈ ಹತ್ತು ವರ್ಷಗಳ ಕಾಲ ಏಕಾಂಗಿಯಾಗಿ ಜೈಲಿನಲ್ಲಿರಿಸಿರುವುದರಿಂದ ಮಾನಸಿಕ ಹಿಂಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ 

Exit mobile version